ಪಡುಬೆಟ್ಟು ಶಾಲಾ ವಿದ್ಯಾರ್ಥಿನಿ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಸರಕಾರಿ ಉನ್ನತ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಹಿರಿಯ ವಿಭಾಗದ ಕವನ ವಾಚನ ಸ್ಪರ್ಧೆಯಲ್ಲಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಪಡುಬೆಟ್ಟು ಇಲ್ಲಿನ 7ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಮೆಲಿಷ ನಿಶಾಲ್ ಮಸ್ಕರೇನ್ಹಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. 
        ನೆಲ್ಯಾಡಿ ಗ್ರಾಮ ಪಡುಬೆಟ್ಟು ನಿವಾಸಿ ಶ್ರೀ ಮನೀಶ್ ಮಸ್ಕರೇನ್ಹಸ್ ಹಾಗೂ ಪಡುಬೆಟ್ಟು ಶಾಲೆಯ ಅತಿಥಿ ಶಿಕ್ಷಕಿ ಶ್ರೀಮತಿ ನ್ಯಾನ್ಸಿ ಲಿಝಿ ದಂಪತಿಗಳ ಸುಪುತ್ರಿ. ವಿದ್ಯಾರ್ಥಿನಿಗೆ ಶಾಲಾ ಮುಖ್ಯಗುರುಗಳಾದ ಶ್ರೀಮತಿ ಜೆಸ್ಸಿ ಕೆ.ಎ. ಹಾಗೂ ಸಹಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿರುತ್ತಾರೆ.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ