ದಕ್ಷಿಣ ಕನ್ನಡ, ಕಡಬ ತಾಲೂಕು: ಕೌಕ್ರಾಡಿ ಗ್ರಾಮದಲ್ಲಿ ಇಂದು (21-12-2025) ಬೆಳಗ್ಗೆ ಸಂಭವಿಸಿದ ದುರ್ಘಟನೆಯಲ್ಲಿ ಕೌಕ್ರಾಡಿ ಗ್ರಾಮದ ಪೊಟ್ಟುಕೆರೆ ನಿವಾಸಿ ಉಮೇಶ್ ಗೌಡರ ಪತ್ನಿ ಲೀಲಾವತಿ ಅವರು ಕಾಡುಹಂದಿ ದಾಳಿಗೆ ಗುರಿಯಾಗಿ ಗಾಯಗೊಂಡಿದ್ದಾರೆ.
ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ತಮ್ಮ ತೋಟದಲ್ಲಿ ಹುಲ್ಲು ಕತ್ತರಿಸುತ್ತಿದ್ದಾಗ ಅರಣ್ಯದಿಂದ ಬಂದ ಕಾಡುಹಂದಿ ದಾಳಿ ನಡೆಸಿದ್ದು, ಎರಡು ಕೈಗಳಿಗೆ ತೀವ್ರ ಗಾಯಗಳಾಗಿವೆ ಎನ್ನಲಾಗಿದೆ.
ಗಾಯಗೊಂಡ ಲೀಲಾವತಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ಈ ಕುರಿತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮುಂದಿನ ಕ್ರಮ ಕುರಿತು ಅರಣ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತದಿಂದ ಮಾಹಿತಿ ನಿರೀಕ್ಷಿಸಲಾಗಿದೆ.
Post a Comment