ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆಯಲ್ಲಿ ಮಧ್ಯರಾತ್ರಿ ನುಗ್ಗಿ ದಂಪತಿಯನ್ನು ಬೆದರಿಸಿದ ಪ್ರಕರಣದಲ್ಲಿ ಪುತ್ತೂರು ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್ ವಶಪಡಿಸಿಕೊಂಡಿದ್ದಾರೆ.
ಪುತ್ತೂರು ಕಸಬಾ ನಿವಾಸಿ ಎ.ವಿ.ನಾರಾಯಣ (84) ಅವರ ದೂರಿನಂತೆ, ಡಿಸೆಂಬರ್ 17ರ ಮಧ್ಯರಾತ್ರಿ ಇಬ್ಬರು ಹೆಲ್ಮೆಟ್ ಧರಿಸಿದ ಅಪರಿಚಿತರು ಮನೆಯ ಹಿಂಬಾಗಿಲಿನಿಂದ ಒಳನುಗ್ಗಿ ಬೆಲೆಬಾಳುವ ಸೊತ್ತುಗಳನ್ನು ದೋಚಲು ಯತ್ನಿಸಿದ್ದರು. ಈ ವೇಳೆ ಆರೋಪಿಗಳು ದಂಪತಿಗೆ ಬೆದರಿಕೆ ಒಡ್ಡಿದ್ದು, ನಡೆದ ತಳ್ಳಾಟದಲ್ಲಿ ನಾರಾಯಣರ ಪತ್ನಿಗೆ ಗಾಯವಾಗಿದೆ. ಪಿರ್ಯಾದಿದಾರರು ಜೋರಾಗಿ ಕಿರುಚಿದ ಪರಿಣಾಮ ಆರೋಪಿಗಳು ಹೆದರಿ ಓಡಿ ಪರಾರಿಯಾಗಿದ್ದರು. ಆದರೆ ಯಾವುದೇ ಸೊತ್ತು ಕಳ್ಳತನವಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ.127/2025, ಕಲಂ 307 ಜೊತೆಗೆ 3(5) ಬಿ ಎನ್ ಎಸ್ 2023ರ ಅನ್ವಯ ಪ್ರಕರಣ ದಾಖಲಾಗಿತ್ತು.
ತನಿಖೆ ಹಮ್ಮಿಕೊಂಡಿದ್ದ ಪುತ್ತೂರು ನಗರ ಪೊಲೀಸರು ಪುತ್ತೂರು ಮುಡೂರು ಮೂಲದ, ಪ್ರಸ್ತುತ ಪಂಜದಲ್ಲಿ ಬಾಡಿಗೆ ವಾಸವಾಗಿದ್ದ ಕಾರ್ತಿಕ್ ರಾವ್ (31) ಹಾಗೂ ಅವನ ಪತ್ನಿ ಕೆ.ಎಸ್. ಸ್ವಾತಿ ರಾವ್ (25) ಇವರನ್ನು ಬಂಧಿಸಿದ್ದಾರೆ. ಬಂಧಿತ ಕಾರ್ತಿಕ್ ರಾವ್ ಸಹಾಯಕ ಅರ್ಚಕರಾಗಿ ಕೆಲಸ ಮಾಡುತ್ತಿದ್ದನೆಂದು ತಿಳಿದು ಬಂದಿದೆ.
ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
إرسال تعليق