ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಕೊರಗಜ್ಜ ದೈವಸ್ಥಾನಕ್ಕೆ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬೇಟಿ.
ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಕೊರಗಜ್ಜ ದೈವಸ್ಥಾನಕ್ಕೆ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ
ಕುಕ್ಕೆ ಸುಬ್ರಹ್ಮಣ್ಯ, ದಕ್ಷಿಣ ಕನ್ನಡ:
ಪವಿತ್ರ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮೈಸೂರು ಮಹಾರಾಜರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ, ದೇವರ ಗದ್ದೆಯಲ್ಲಿರುವ ಪ್ರಸಿದ್ಧ ಕೊರಗಜ್ಜ ದೈವಸ್ಥಾನಕ್ಕೆ ವಿಶೇಷ ಬೇಟಿ ನೀಡಿದರು.
ಮಹಾರಾಜರು ಕೊರಗಜ್ಜ ದೈವಕ್ಕೆ ಪೂಜೆ ಸಲ್ಲಿಸಿ ಭಕ್ತಿಭಾವದಿಂದ ಪ್ರಾರ್ಥನೆ ನೆರವೇರಿಸಿದರು. ಈ ವೇಳೆ ದೈವದ ಪರಂಪರೆ ಮಹತ್ವ ಹಾಗೂ ತುಳುನಾಡಿನ ಸಾಂಸ್ಕೃತಿಕ ಆಚರಣೆಗಳ ಕುರಿತು ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಹರೀಶ್ ಇಂಜಾಡಿ ಅವರು ಮಹಾರಾಜರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಅಲ್ಲದೆ ಅನೇಕ ಭಗವದ್ಭಕ್ತರು ಹಾಗೂ ಭಕ್ತ ಸಮುದಾಯದವರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಧಾರ್ಮಿಕ ಗೌರವ ಹೆಚ್ಚಿಸಿದರು.
ಮೈಸೂರು ಮಹಾರಾಜರ ಭೇಟಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವವನ್ನು ಮತ್ತೊಮ್ಮೆ ಪ್ರಸ್ತಾಪಿಸುವಂತಾಗಿದ್ದು, ಭಕ್ತರಲ್ಲಿ ಸಂತೋಷ ಹಾಗೂ ಭಕ್ತಿಭಾವವನ್ನು ಮೂಡಿಸಿದೆ.
Comments
Post a Comment