*ಶ್ರೀರಾಮ ವಿದ್ಯಾಲಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ*

ಶ್ರೀ ರಾಮ ವಿದ್ಯಾಲಯ ಸೂರ್ಯ ನಗರ ನೆಲ್ಯಾಡಿಯಲ್ಲಿ ಫೆಬ್ರವರಿ 18 ಬುಧವಾರದಂದು ಅಶ್ವಿನಿ ಆಸ್ಪತ್ರೆ ನೆಲ್ಯಾಡಿ ಇದರ ಸಹಯೋಗದೊಂದಿಗೆ ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ಡಾ| ರವಿಶಂಕರ್ ಎಂ. ಶ್ರೀ ದುರ್ಗಾ ಕ್ಲಿನಿಕ್ ನೆಲ್ಯಾಡಿ ಇವರು ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ , ಮನುಷ್ಯರಲ್ಲಿ ಕಣ್ಣು ಒಂದು ಮುಖ್ಯ ಅಂಗವಾಗಿದೆ. ಸಾರ್ವಜನಿಕರಿಗೆ ಉಪಯುಕ್ತವಾಗುವಂತಹ ಇಂತಹ ಸೇವೆ ಇನ್ನಷ್ಟು ನಡೆಯಲಿ, ಎಲ್ಲರೂ ಸದುಪಯೋಗಪಡಿಸಿಕೊಳ್ಳುವಂತಾಗಲಿ ಎಂದು ಹೇಳಿ ಶುಭ ಹಾರೈಸಿದರು. ಅತಿಥಿಗಳಾಗಿ ಆಗಮಿಸಿದ್ದ ಪಿ .ಎಲ್. ಡಿ ಬ್ಯಾಂಕ್ ಪುತ್ತೂರು ಇದರ ಅಧ್ಯಕ್ಷರಾದ ಶ್ರೀಯುತ ಭಾಸ್ಕರ ಎಸ್. ಗೌಡ ಇಚಿಲಂಪಾಡಿಯವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಣ್ಣಿನ ತಪಾಸಣಾ ಅಧಿಕಾರಿಗಳಾಗಿ ಆಗಮಿಸಿದ ಡಾ|ಎಸ್. ಎಂ. ಅಶ್ವಿನ್ ಸಾಗರ್ ಕಣ್ಣಿನ ಆರೋಗ್ಯದ ಬಗ್ಗೆ ಮಕ್ಕಳಿಗೆ ಮಾಹಿತಿಯನ್ನು ನೀಡಿದರು.
  ಕಾರ್ಯಕ್ರಮದ ವೇದಿಕೆಯಲ್ಲಿ ಕನ್ನಡ ಮಾಧ್ಯಮದ ಮುಖ್ಯ ಗುರುಗಳಾದ ಶ್ರೀಯುತ ಗಣೇಶ್ ವಾಗ್ಲೆ ಹಾಗೂ ಆಂಗ್ಲ ಮಾಧ್ಯಮದ ಮುಖ್ಯ ಶಿಕ್ಷಕಿ ಶ್ರೀಮತಿ ಕಾವ್ಯ ಮಾತಾಜಿ ಉಪಸ್ಥಿತರಿದ್ದರು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾಲಯದ ಅಧ್ಯಕ್ಷರಾದ ಶ್ರೀಯುತ ಡಾ |ಮುರಳಿಧರ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕನ್ನಡ ಮಾಧ್ಯಮ ವಿಭಾಗದ ಮುಖ್ಯ ಶಿಕ್ಷಕ ಶ್ರೀಯುತ ಗಣೇಶ್ ವಾಗ್ಲೆ ವಂದಿಸಿದರು. ಶ್ರೀಮತಿ ಶುಭರಾಣಿ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.
 ಬಳಿಕ ವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳ ಕಣ್ಣಿನ ತಪಾಸಣಾ ನಡೆಸಲಾಯಿತು.

Post a Comment

أحدث أقدم