ಕಡಬ ಪೊಲೀಸ್ ಠಾಣೆಯಲ್ಲಿ ಸ್ವಾಧೀನಪಡಿಸಿಕೊಂಡ ಹುಂಜ ಕೋಳಿಗಳ ಬಹಿರಂಗ ಹರಾಜು.

ಕಡಬ: ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಧೀನಪಡಿಸಿಕೊಂಡಿರುವ ಒಟ್ಟು ಮೂರು ಹುಂಜ ಕೋಳಿಗಳನ್ನು ಮಾನ್ಯ ನ್ಯಾಯಾಲಯದ ಆದೇಶದಂತೆ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಈ ಬಹಿರಂಗ ಹರಾಜು ಪ್ರಕ್ರಿಯೆ ಫೆಬ್ರವರಿ 19, 2026ರಂದು ಬೆಳಿಗ್ಗೆ 10.00 ಗಂಟೆಗೆ ಕಡಬ ಪೊಲೀಸ್ ಠಾಣೆ ಆವರಣದಲ್ಲಿ ನಡೆಯಲಿದೆ.
ಹರಾಜಿನಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ಸಾರ್ವಜನಿಕರು ನಿಗದಿತ ದಿನಾಂಕ ಮತ್ತು ಸಮಯದಲ್ಲಿ ಸ್ಥಳಕ್ಕೆ ಹಾಜರಾಗಿ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
— ಠಾಣಾಧಿಕಾರಿಗಳು
ಕಡಬ ಪೊಲೀಸ್ ಠಾಣೆ

Post a Comment

أحدث أقدم