ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಜ್ಞಾನ ಮಾಡೆಲ್ ಪ್ರದರ್ಶನ.

ಸುಬ್ರಮಣ್ಯ ಫೆಬ್ರವರಿ 28 : ಸುಬ್ರಹ್ಮಣ್ಯದ ಕುಮಾರಸ್ವಾಮಿ ಪ್ರಾಥಮಿಕ ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನವಾದ ಇಂದು ಶನಿವಾರ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳೇ ತಯಾರಿಸಿದಂತಹ ವಿಜ್ಞಾನ ಮಾದರಿ ಗಳನ್ನು ಪ್ರದರ್ಶಿಸಲಾಯಿತು.

 ಸುಮಾರು ಹತ್ತಕ್ಕೂ ಮಿಕ್ಕಿ ವಿಜ್ಞಾನ ಮಾದರಿ ಗಳನ್ನು ತಯಾರಿಸಿದ ವಿದ್ಯಾರ್ಥಿಗಳು ಅವುಗಳನ್ನು ವೀಕ್ಷಿಸಿದ ಸಂಸ್ಥೆಯ ಎಲ್ಲ ವಿದ್ಯಾರ್ಥಿಗಳಿಗೆ ವಿವರಣೆ ನೀಡುವಲ್ಲಿ ಸಫಲರಾದರು. ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಸಂಸ್ಥೆಯ ಅಧ್ಯಾಪಕ ವೃಂದದವರು ಸಹಕರಿಸಿದ್ದರು.

 ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕ ಚಂದ್ರಶೇಖರ್ ನಾಯರ್ ವಿದ್ಯಾರ್ಥಿಗಳ ಮಾಡೆಲ್ ಪ್ರದರ್ಶನಗಳನ್ನ ವೀಕ್ಷಿಸಿ ಪ್ರಶಂಸೆ ಪಟ್ಟರು. ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ವಿದ್ಯಾರತ್ನ ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿಗಳಿಗೆ ಮಾಡೆಲ್ ತಯಾರಿಸುವಲ್ಲಿ ಮಾರ್ಗದರ್ಶನ ಮಾಹಿತಿ ಹಾಗೂ ಪ್ರೋತ್ಸಾಹ ನೀಡುತ್ತಿದ್ದರು.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ವ್ಯವಸ್ಥೆಯಲ್ಲಿ ಖಾಸಗಿ ಬಸ್ ಸಂಸ್ಥೆಯ ನೂತನ ಹೆಜ್ಜೆ – ಗ್ರಾಮೀಣ ಭಾಗದ ಅಭಿವೃದ್ಧಿಗೆ ಬಲ.

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!