ಕುಕ್ಕೆ: ಆಟೋ ಚಾಲಕ-ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ.

ಸುಬ್ರಹ್ಮಣ್ಯ: ಕುಕ್ಕೆಶ್ರೀ ಆಟೋ ಚಾಲಕ-ಮಾಲಕರ ಸಂಘ, ಸುಬ್ರಹ್ಮಣ್ಯ ಇದರ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಶುಕ್ರವಾರ ನಡೆದ ಸಂಘದ ಸಭೆಯಲ್ಲಿ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಭುವನೇಶ್ ಅಗೋಳಿಕಜೆ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಉಮೇಶ್ ಕೆ.ಎನ್ ಅವರನ್ನು ನೇಮಕ ಮಾಡಲಾಯಿತು.
ಕಾರ್ಯದರ್ಶಿಯಾಗಿ ವಿಘ್ನೇಶ್ ದೇವರಗದ್ದೆ, ಕೋಶಾಧಿಕಾರಿಯಾಗಿ ಗಣೇಶ್ ಅಗೋಳಿಕಜೆ, ಉಪಾಧ್ಯಕ್ಷರಾಗಿ ಶರತ್ ದೇವರಗದ್ದೆ, ಜತೆ ಕಾರ್ಯದರ್ಶಿಯಾಗಿ ಸದಾನಂದ ದೇವರಗದ್ದೆ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಕುಮಾರ್ ನಾಯ್ಕ್ ನೂಚಿಲ ಆಯ್ಕೆಯಾದರು.
ನಿರ್ದೇಶಕರಾಗಿ ಪ್ರಶಾಂತ್ ಮೂಜೂರು, ದಿನೇಶ್ ಗಾಂಗೇಯ, ಮಹೇಶ್ ಗುಡ್ಡೆಮನೆ, ಉಷಾಕುಮಾರ್ ಕುಲ್ಕುಂದ, ತೇಜಕುಮಾರ್ ಅಗೋಳಿಕಜೆ ಮತ್ತು ಮಹೇಶ್ಚಂದ್ರ ನೂಚಿಲ ಅವರನ್ನು ನೇಮಕ ಮಾಡಲಾಗಿದೆ.
ಸಭೆಗೆ ಸಂಘದ ಅಧ್ಯಕ್ಷ ಸಂತೋಷ್ ಕುಲ್ಕುಂದ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಸಂಘದ ವಾರ್ಷಿಕೋತ್ಸವ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ