ನೆಟ್ಟಣ ರೈಲು ನಿಲ್ದಾಣಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ದಿಢೀರ್ ಭೇಟಿ – ವ್ಯವಸ್ಥೆ ಸುಧಾರಣೆಗೆ ಸೂಚನೆ.

ಕಡಬ: ಸಾರ್ವಜನಿಕರಿಂದ ವಿವಿಧ ರೀತಿಯ ದೂರುಗಳು ಬಂದ ಹಿನ್ನೆಲೆಯಲ್ಲಿ ನೆಟ್ಟಣ ರೈಲು ನಿಲ್ದಾಣಕ್ಕೆ ಭಾಗೀರಥಿ ಮುರುಳ್ಯ ಅವರು ದಿಢೀರ್ ಭೇಟಿ ನೀಡಿ ಸ್ಥಳೀಯವಾಗಿ ಪರಿಶೀಲನೆ ನಡೆಸಿದರು.
ರೈಲು ನಿಲ್ದಾಣದ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಪ್ರಯಾಣಿಕರ ನಿರೀಕ್ಷಣಾ ಕೋಣೆ, ಬೆಳಕು ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದ ಶಾಸಕಿ, ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಸ್ಟೇಷನ್ ಮಾಸ್ಟರ್ ಹಾಗೂ ಸಿಬ್ಬಂದಿಗಳಿಗೆ ಸೂಚನೆ ನೀಡಿದರು. ಸಾರ್ವಜನಿಕರಿಂದ ಬಂದಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲಿ ಸರಿಪಡಿಸುವ ಭರವಸೆ ಕೂಡ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೃಷ್ಣ ಶೆಟ್ಟಿ ಕಡಬ, C.A ಬ್ಯಾಂಕ್ ಬಿಳಿನೆಲೆ ಅಧ್ಯಕ್ಷ ವಾಡ್ಯಪ್ಪ ಗೌಡ, ಕೊಂಬಾರು ಗ್ರಾಮ ಪಂಚಾಯತ್ ಅಧ್ಯಕ್ಷ ಮಧುಸೂದನ್, ಪ್ರಮುಖರಾದ ಕಿಶೋರ್ ಶಿರಾಡಿ, ಪ್ರಸಾದ್ ನೆಟ್ಟಣ, ದೀಕ್ಷಿತ್ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಸ್ಥಳೀಯ ಪ್ರಯಾಣಿಕರು ಮತ್ತು ನಾಗರಿಕರು ಶಾಸಕರ ತಕ್ಷಣದ ಭೇಟಿ ಹಾಗೂ ಸ್ಪಂದನೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ