ಕೆಟಿಡಿಒ ಯೂನಿಯನ್ ದ.ಕ ಜಿಲ್ಲಾ ವಾರ್ಷಿಕ ಕ್ರೀಡಾಕೂಟ ಸಮಾರೋಪ: ಶಾಸಕಿ ಭಾಗೀರಥಿ ಮುರುಳ್ಯರಿಂದ ಸಾಧಕರಿಗೆ ಸನ್ಮಾನ

ದಕ್ಷಿಣ ಕನ್ನಡ: ಕೆಟಿಡಿಒ (KTDO) ಯೂನಿಯನ್ ದ.ಕ ಜಿಲ್ಲಾ ಘಟಕದ ವತಿಯಿಂದ ಸಂಘದ ಸದಸ್ಯರಿಗಾಗಿ ಹಮ್ಮಿಕೊಳ್ಳಲಾದ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭವು ಉತ್ಸಾಹಭರಿತವಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸದಸ್ಯರಿಗೆ ಸನ್ಮಾನ ನೆರವೇರಿಸಿ ಶುಭಹಾರೈಸಿದರು.
ಮಾತನಾಡಿದ ಅವರು, ಕ್ರೀಡೆಗಳು ಆರೋಗ್ಯದ ಜೊತೆಗೆ ಶಿಸ್ತು, ಸಹಕಾರ ಮತ್ತು ತಂಡಭಾವವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು. ಸಂಘಟನೆಗಳ ಮೂಲಕ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವುದು ಸದಸ್ಯರ ಮಧ್ಯೆ ಏಕತೆ ಮತ್ತು ಆತ್ಮೀಯತೆಯನ್ನು ಹೆಚ್ಚಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಯೂನಿಯನ್‌ನ ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಸಾದೀಕ್ ಕುಳಾಯಿ, ನ್ಯಾಯವಾದಿ ಚೇತನ್ ಪುತ್ತೂರು, ರವಿ ಕಕ್ಕೆಪದವು, ಹರೀಶ್ ಪುತ್ರನ್, ಕಿಶೋರ್ ನೆಟ್ಟಣ, ಜಯಂತ್ ಎಲಿಮಲೆ, ಗ್ರಾಮಪಂಚಾಯತ್ ಸದಸ್ಯ ಗೀರಿಶ್ ಪೈಲಾಜೆ, ದೀಲಿಪ್ ಉಪ್ಪಲಿಕೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವಿಭಿನ್ನ ಕ್ರೀಡಾ ಸ್ಪರ್ಧೆಗಳು ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮಗಳೊಂದಿಗೆ ಸಮಾರೋಪ ಸಮಾರಂಭ ಯಶಸ್ವಿಯಾಗಿ ನೆರವೇರಿತು.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ವ್ಯವಸ್ಥೆಯಲ್ಲಿ ಖಾಸಗಿ ಬಸ್ ಸಂಸ್ಥೆಯ ನೂತನ ಹೆಜ್ಜೆ – ಗ್ರಾಮೀಣ ಭಾಗದ ಅಭಿವೃದ್ಧಿಗೆ ಬಲ.

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!