ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ ಎ.24ರಂದು

ಸುಬ್ರಹ್ಮಣ್ಯ, ಎ.24: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 24ರಂದು ಶುಕ್ರವಾರ ತಾಂಬೂಲ ಪ್ರಶ್ನಾ ಚಿಂತನೆ ಕಾರ್ಯಕ್ರಮ ನಡೆಯಲಿದೆ.
ದೇವಳದ ಆಡಳಿತ ಕಚೇರಿಯ ಎರಡನೇ ಮಹಡಿಯ ಸಭಾಂಗಣದಲ್ಲಿ ಬೆಳಿಗ್ಗೆ 10.30ರಿಂದ ಈ ಪ್ರಶ್ನಾ ಚಿಂತನೆ ಆರಂಭವಾಗಲಿದೆ ಎಂದು ದೇವಸ್ಥಾನ ಆಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಶ್ರೀ ದೇವಳದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು, ಪರಿವಾರ ದೇವರ ಗುಡಿ ನವೀಕರಣ, ದೈವಗಳ ಗುಡಿಗಳ ಪುನರ್‌ನಿರ್ಮಾಣ ಸೇರಿದಂತೆ ವಿವಿಧ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಲಿದ್ದು, ಭಕ್ತರ ಅಭಿಪ್ರಾಯಗಳನ್ನು ಕೂಡ ಸಂಗ್ರಹಿಸಲಾಗುತ್ತದೆ.
ಈ ಹಿನ್ನೆಲೆ, ಸರ್ವ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆ-ಸೂಚನೆಗಳನ್ನು ನೀಡುವಂತೆ ದೇವಸ್ಥಾನ ಆಡಳಿತ ವಿನಂತಿಸಿದೆ.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ