ಮಂಜುನಾಥ ಭಂಡಾರಿ ಸಚಿವರಾಗಲೆಂದು ಕುಕ್ಕೆ ಶ್ರೀ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ.

ಕುಕ್ಕೆ ಸುಬ್ರಹ್ಮಣ್ಯ, ಮೇ 30: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ವಿಧಾನಸಭಾ ಸದಸ್ಯ ಮಂಜುನಾಥ ಭಂಡಾರಿ ಅವರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಆಶಿಸಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಶ್ರೀ ದೇವರ ಸನ್ನಿಧಿಯಲ್ಲಿ ವಿಶೇಷ ಸಂಕಲ್ಪ ನಡೆಸಿ, ಮಂಜುನಾಥ ಭಂಡಾರಿ ಅವರ ರಾಜಕೀಯ ಉನ್ನತಿ, ಉತ್ತಮ ಆರೋಗ್ಯ ಹಾಗೂ ಸಾರ್ವಜನಿಕ ಸೇವೆಯಲ್ಲಿ ಇನ್ನಷ್ಟು ಯಶಸ್ಸು ದೊರೆಯಲೆಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು ವಿಶೇಷ ಆಶೀರ್ವಚನ ನೀಡಿ, ಮಂಜುನಾಥ ಭಂಡಾರಿ ಅವರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಶ್ರೀ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು, ಈ ಹಿನ್ನೆಲೆಯಲ್ಲಿ ಚಂದ್ರಮಂಡಲ ಉತ್ಸವ ನೆರವೇರಿಸುವಂತೆ ಸಲಹೆ ನೀಡಿದರು ಎಂದು ತಿಳಿದುಬಂದಿದೆ.

ಮಂಜುನಾಥ ಭಂಡಾರಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕಾಂಗ್ರೆಸ್ ನಾಯಕರಾಗಿದ್ದು, ಪಕ್ಷ ಸಂಘಟನೆ ಹಾಗೂ ಜನಸೇವಾ ಕಾರ್ಯಗಳ ಮೂಲಕ ಗಮನ ಸೆಳೆದಿದ್ದಾರೆ. ಜಿಲ್ಲೆಯ ಅಭಿವೃದ್ಧಿ ಹಾಗೂ ಜನಪರ ವಿಚಾರಗಳಲ್ಲಿ ನಿರಂತರವಾಗಿ ಧ್ವನಿಯಾಗಿರುವ ಅವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂಬ ನಿರೀಕ್ಷೆ ಬೆಂಬಲಿಗರ ವಲಯದಲ್ಲಿ ವ್ಯಕ್ತವಾಗುತ್ತಿದೆ.

ವಿಶೇಷ ಪ್ರಾರ್ಥನೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಸದಸ್ಯರಾದ ಅಶೋಕ್ ನೆಕ್ರಜೆ, ಅಜಿತ್ ಪಾಲೇರಿ, ಶ್ರೀಮತಿ ಪ್ರವೀಣಾ ರೈ, ಶ್ರೀಮತಿ ಸೌಮ್ಯ ಭರತ್, ಶ್ರೀಮತಿ ಲೀಲಾ ಮನಮೋಹನ್, ಡಾ. ರಘು ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು ಭಾಗವಹಿಸಿ ಶ್ರೀ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ವ್ಯವಸ್ಥೆಯಲ್ಲಿ ಖಾಸಗಿ ಬಸ್ ಸಂಸ್ಥೆಯ ನೂತನ ಹೆಜ್ಜೆ – ಗ್ರಾಮೀಣ ಭಾಗದ ಅಭಿವೃದ್ಧಿಗೆ ಬಲ.

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!