ಕುಕ್ಕೆ ಸುಬ್ರಹ್ಮಣ್ಯ ಹೊಸಳ್ಳಿಗಮ್ಮ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಸಂಭ್ರಮ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸಮೀಪದ ಹೊಸಳ್ಳಿಗಮ್ಮ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ಭಕ್ತಿಭಾವ ಮತ್ತು ಧಾರ್ಮಿಕ ಸಂಭ್ರಮದ ನಡುವೆ ನೆರವೇರಿತು. ವಾರ್ಷಿಕೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆಗಳು ಹಾಗೂ ಧಾರ್ಮಿಕ ವಿಧಿವಿಧಾನಗಳು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿದವು.
ಕಾರ್ಯಕ್ರಮದ ಪ್ರಯುಕ್ತ ದೇವಾಲಯದಲ್ಲಿ ಚಂಡಿಕಾ ಹೋಮ, ಹೊಸಳ್ಳಿಗಮ್ಮ ದೈವಕ್ಕೆ ವಿಶೇಷ ತಂಬುಲ ಸೇವೆ ಹಾಗೂ ಮಂಗಳಾರತಿ ಸೇವೆಗಳು ನೆರವೇರಿಸಲಾಯಿತು. ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ ಭಕ್ತರು ತಾಯಿಯ ದರ್ಶನ ಪಡೆದು ಆಶೀರ್ವಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹರೀಶ್ ಇಂಜಾಡಿ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸೀತಾರಾಮ ಎಡಪಡಿತ್ತಾಯ, ಅಶೋಕ್ ನೆಕ್ರಜೆ, ಡಾ. ರಘು, ಅಜಿತ್ ಪಾಲೇರಿ, ಪ್ರವೀಣಾ ರೈ, ಸೌಮ್ಯ ಭರತ್, ಲೀಲಾ ಮನಮೋಹನ್ ಹಾಗೂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಏಸುರಾಜ್ ಭಾಗವಹಿಸಿದರು.
ಅಲ್ಲದೆ ಅನೇಕ ಭಗವತ್ ಭಕ್ತರು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಹೊಸಳ್ಳಿಗಮ್ಮ ತಾಯಿಯ ಪ್ರಸಾದವನ್ನು ಸ್ವೀಕರಿಸಿ ಧನ್ಯತೆ ಪಡೆದರು. ದೇವಸ್ಥಾನ ವಾತಾವರಣವು ಭಕ್ತರ ಜಯಘೋಷ ಹಾಗೂ ಧಾರ್ಮಿಕ ಆಚರಣೆಗಳಿಂದ ಭಕ್ತಿಮಯವಾಗಿ ಕಂಗೊಳಿಸಿತು.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ