*ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆ ಯ 5 ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಗೆ ಆಯ್ಕೆ.....*
ಮೇ 1 ರಿಂದ 3ರ ವರೆಗೆ ವೆಸ್ಟ್ ಅಂದೇರಿ ಮುಂಬೈಯಲ್ಲಿ ನಡೆದ 3ನೇ ರಾಷ್ಟ್ರೀಯ ಒಬ್ಲೀಕ್ ಕರಾಟೆ ಟೂರ್ನಮೆಂಟ್ ನಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ಪಿ ಯು ಕಾಲೇಜಿನ15 ವಿದ್ಯಾರ್ಥಿಗಳು ಭಾಗವಹಿಸಿದ್ದು 5 ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಗೆ ಆಯ್ಕೆಯಾದರು.ಅಕ್ಟೋಬರ್ ತಿಂಗಳ 5 ರಿಂದ 10 ರ ವರೆಗೆ ಪುಣೆ ಯ ಮಹಾರಾಷ್ಟ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ (WGKF)ಕರಾಟೆ ಚಾಂಪಿಯನ್ ಶಿಪ್ ನಡೆಯಲಿದ್ದು
ಮೊಹಮ್ಮದ್ ಹಿಷಾಮ್ ಕುಮಿಟೆ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ, ಫಾತಿಮತ್ ಫಸಿಲಾ,ಅದ್ವೈತ್, ಮನ್ವಿತ್ ಕುಮಾರ್ ಯು,ಝಯಿರ ಮಲಿಕ್ ಕುಮಿಟೆ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಪಡೆದುಕೊಂಡರು.
ವಿದ್ಯಾರ್ಥಿಗಳ ರಾಷ್ಟ್ರೀಯ ಮಟ್ಟದ ಈ ಸಾಧನೆಯನ್ನು ಶ್ಲಾಘಿಸಿ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಡಾ. ವರ್ಗಿಸ್ ಕೈಪನಡ್ಕ, ಮತ್ತು ಅಧ್ಯಾಪಕ ವೃಂದ ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದರು,
Comments
Post a Comment