*ಸದ್ದಿಲ್ಲದೆ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು; ಮಾಧ್ಯಮಗಳ ನಿರೀಕ್ಷೆಗೆ ನಿರಾಸೆ – ಅಭಿವೃದ್ಧಿ ಬಗ್ಗೆ ಸ್ಪಷ್ಟನೆ ನೀಡುವಂತೆ ಒತ್ತಾಯ*
ಕುಕ್ಕೆ ಸುಬ್ರಹ್ಮಣ್ಯ ;ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾದ ಶರತ್ ಐಎಎಸ್ ಅವರು ಜೂನ್ 28ರ ರಾತ್ರಿ ಸದ್ದಿಲ್ಲದೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ, ಆದಿಶೇಷ ವಸತಿಗೃಹದಲ್ಲಿ ವಾಸ್ತವ್ಯ ಹೂಡಿದ ಬಳಿಕ ಜೂನ್ 29ರ ಬೆಳಿಗ್ಗೆ ಸುಮಾರು 7 ಗಂಟೆಗೆ ಶ್ರೀ ದೇವರ ದರ್ಶನ ಪಡೆದು ಯಾವುದೇ ಮಾಧ್ಯಮದವರೊಂದಿಗೆ ಮಾತನಾಡದೆ ಹಾಗೂ ಪತ್ರಿಕಾ ಹೇಳಿಕೆ ನೀಡದೆ ತೆರಳಿರುವ ಮಾಹಿತಿ ಲಭ್ಯವಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಭಿವೃದ್ಧಿ ಕುರಿತು ಆಯುಕ್ತರು ಮಹತ್ವದ ಘೋಷಣೆ ಮಾಡಬಹುದು ಎಂಬ ನಿರೀಕ್ಷೆಯಲ್ಲಿ ಕಾಯುತ್ತಿದ್ದ ಮಾಧ್ಯಮ ಪ್ರತಿನಿಧಿಗಳಿಗೆ ಈ ನಡೆ ನಿರಾಸೆ ಉಂಟುಮಾಡಿದೆ. ರಾಜ್ಯದ ಪ್ರಮುಖ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರಿಗೆ ಇನ್ನಷ್ಟು ಉತ್ತಮ ಮೂಲಭೂತ ಸೌಲಭ್ಯಗಳು ಕಲ್ಪಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ವಿಶೇಷವಾಗಿ ಭಕ್ತರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಶೌಚಾಲಯಗಳ ನಿರ್ಮಾಣ, ರಥಬೀದಿಯ ಶೆಡ್‌ನಲ್ಲಿ ರಾತ್ರಿ ತಂಗುವ ಭಕ್ತರಿಗೆ ಸೂಕ್ತ ವಸತಿ ವ್ಯವಸ್ಥೆ, ಮಳೆಗಾಲದಲ್ಲಿ ರಸ್ತೆಯ ಮೇಲೆ ಹರಿಯುವ ನೀರನ್ನು ತಡೆಯಲು ಸಮರ್ಪಕ ಚರಂಡಿ ವ್ಯವಸ್ಥೆ, ಗುಣಮಟ್ಟದ ಮತ್ತು ವಿಶಾಲ ವಾಹನ ನಿಲುಗಡೆ ವ್ಯವಸ್ಥೆ, ಹೆಚ್ಚಿನ ಭದ್ರತಾ ಸಿಬ್ಬಂದಿ ನೇಮಕ ಹಾಗೂ ಭಕ್ತರಿಗೆ ಪೂಜೆ ಮತ್ತು ಸೇವೆಗಳ ಕುರಿತು ಮಾಹಿತಿ ನೀಡುವ ಸಹಾಯ ಕೇಂ...