ಕಡಬ: ಬಿಜೆಪಿಗೆ ಶಾಕ್ – 20 ಕುಟುಂಬಗಳ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ.
ಕಡಬ: ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತ, ಬಡವರ ಪರ ಇರುವ ಕಾಳಜಿ ಹಾಗೂ ಜನಪರ ಯೋಜನೆಗಳಿಂದ ಪ್ರೇರಿತರಾಗಿ ಕಡಬ ತಾಲೂಕಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ದೊಡ್ಡಕೊಪ್ಪ ವಾರ್ಡ್‌ನ ಸುಮಾರು 20 ಕುಟುಂಬಗಳ ಬಿಜೆಪಿ ಕಾರ್ಯಕರ್ತರು ಶನಿವಾರ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ. ಅವರ ನೇತೃತ್ವದಲ್ಲಿ ನೂತನ ಸದಸ್ಯರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಸತೀಶ್ ನಾಯ್ಕ್ ಮೇಲಿನಮನೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ. ವರ್ಗೀಸ್, ಪಟ್ಟಣ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು, ಸುಳ್ಯ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಫೈಝಲ್ ಕಡಬ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಮುಖಂಡ ಪಿ.ಪಿ. ಎಲ್ಯಾಸ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನೂತನ ಸದಸ್ಯರನ್ನು ಪಕ್ಷದ ಶಾಲು ಹೊದಿಸಿ ಆತ್ಮೀಯವಾಗಿ ಸ್ವಾಗತಿಸಲಾಯಿತು.
Comments
Post a Comment