ಸುಬ್ರಹ್ಮಣ್ಯ ವಾಲ್ಮೀಕಿ ವಸತಿ ಶಾಲೆಗೆ ಕೊಡುಗೆ ಹಸ್ತಾಂತರ.

ಸುಬ್ರಹ್ಮಣ್ಯ ಜುಲೈ8 ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್( ರಿ) ಸುಬ್ರಹ್ಮಣ್ಯ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಕುರ್ಚಿ ಹಾಗೂ ಟೀಪಾಯಿಗಳನ್ನು ಕೊಡುಗೆಯಾಗಿ ಮಂಗಳವಾರ ನೀಡಲಾಯಿತು.
 ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಡಾ. ಎ ಏ ತಿಲಕ್ ಅವರು ಕೊಡುಗೆಗಳನ್ನು ಹಸ್ತಾಂತರಿಸಿ ಮಾತನಾಡುತ್ತಾ" ಸುಬ್ರಹ್ಮಣ್ಯದ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆಯು ದಿನದಿಂದ ದಿನಕ್ಕೆ ಅಭಿವೃದ್ದಿ ಹೊಂದುತ್ತಿರುವುದು ತುಂಬಾ ಸಂತೋಷದ ವಿಷಯ. ಹಾಗೂ ಇಲ್ಲಿಗೆ ಬೇಕಾಗುವಂತಹ ಅಗತ್ಯ ಸೌಲಭ್ಯಗಳನ್ನ ಮನಗಂಡು ಈ ಕೊಡುಗೆಯನ್ನು ನಮ್ಮ ಟ್ರಸ್ಟ್ ವತಿಯಿಂದ ನೀಡುತ್ತಿದ್ದೇವೆ,ಹಾಗೂ ಮುಂದಿನ ದಿನಗಳಲ್ಲಿ ನಿರಂತರ ಸಹಕಾರವನ್ನು ಕೂಡ ನೀಡುತ್ತೇವೆ" ಎಂದರು. ವೇದಿಕೆಯಲ್ಲಿದ್ದ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕಿ ಗಾಯತ್ರಿ ತಿಲಕ್,ನಿರ್ದೇಶಕ ದಿನೇಶ್ ಎಂಪಿ,ಸಮಾಜ ಸೇವಕ ಡಾ. ರವಿ ಕಕ್ಕೆ ಪದವು,ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ರೋಹಿತ್ ಬಿ.ಬಿ, ಪೂರ್ವ ಅಧ್ಯಕ್ಷ ಗೋಪಾಲ ಎಣ್ಣೆ ಮಜಲ್, ವಾಲ್ಮೀಕಿ ವಸತಿ ಶಾಲಾ ಮೇಲ್ವಿಚಾರಕ ಮುಖ್ಯ ಶಿಕ್ಷಕ ಬಸವರಾಜ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ಆರಂಭದಲ್ಲಿ ವಾಲ್ಮೀಕಿ ವಸತಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ನೆರವೇರಿತು .ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ಪ್ರಾಸ್ತಾವಿಕದೊಂದಿಗೆ ಎಲ್ಲರನ್ನ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಕೊಡುಗೆಯನ್ನು ನೀಡಿದ ಡಾ.ತಿಲಕ್ ದಂಪತಿಗಳನ್ನು ಶಾಲಾ ವತಿಯಿಂದ ಗೌರವಿಸಲಾಯಿತು. ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಮಲ್ಲಿಕಾ,ಶಿಕ್ಷಕಿಯರಾದ ಜೀವಿತ ಕೆ, ಭವ್ಯ ಎ ಎಸ್, ಕವಿತಾ ಎನ್ಎ,ಗೀತ ಸುಧಾ ಎಚ್,ಹರ್ಷಿತ ಬಿ ಸಹಕರಿಸಿದರು. ಸಭೆಯಲ್ಲಿ ವಿದ್ಯಾರ್ಥಿಗಳ ಪೋಷಕರು ಹಾಜರಿದ್ದರು. ರೋಟರಿ ಕ್ಲಬ್ ಪೂರ್ವ ಅಧ್ಯಕ್ಷ ವಿಶ್ವನಾಥ ನಡು ತೋಟ ನಿರೂಪಿಸಿದ ಕಾರ್ಯಕ್ರಮದ ಕೊನೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕಿ ಮಲ್ಲಿಕಾ ಧನ್ಯವಾದ ಸಮರ್ಪಿಸಿದರು.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ