400 ಮೀಟರ್ ಓಟದಲ್ಲಿ 21 ವರ್ಷಗಳ ದಾಖಲೆ ಮುರಿದ ಭಾನವಿ ಪಿ.ಎಸ್.

ಸುಳ್ಯ: 400 ಮೀಟರ್ ಓಟದಲ್ಲಿ 21 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದು ಆಳ್ವಾಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಭಾನವಿ ಪಿ.ಎಸ್. ನೂತನ ದಾಖಲೆ ನಿರ್ಮಿಸಿ ಗಮನ ಸೆಳೆದಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಗಸ್ಟ್ 11 ಮತ್ತು 12ರಂದು ನಡೆದ 18ರ ವಯೋಮಿತಿಯ ರಾಜ್ಯಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯ ಬಾಲಕಿಯರ 400 ಮೀಟರ್ ಓಟದಲ್ಲಿ ಭಾನವಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

2005ರಲ್ಲಿ ದಾಖಲಾಗಿದ್ದ 56.20 ಸೆಕೆಂಡ್‌ಗಳ ದಾಖಲೆಯನ್ನು ಭಾನವಿ 56.16 ಸೆಕೆಂಡ್‌ಗಳಲ್ಲಿ 400 ಮೀಟರ್ ಓಟವನ್ನು ಪೂರ್ಣಗೊಳಿಸುವ ಮೂಲಕ ಮುರಿದಿದ್ದಾರೆ. ಕೇವಲ 0.04 ಸೆಕೆಂಡ್‌ಗಳ ಅಂತರದಲ್ಲಿ ನೂತನ ದಾಖಲೆ ನಿರ್ಮಿಸಿರುವುದು ವಿಶೇಷವಾಗಿದೆ.

ಭಾನವಿ ಪಿ.ಎಸ್. ಅವರು ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ಫೈಲೂರು ಸುರೇಶ್ ಮತ್ತು ಅನಿತಾ ದಂಪತಿಯ ಪುತ್ರಿಯಾಗಿರುವ ಭಾನವಿ, ತರಬೇತುದಾರ ಶಾಂತರಾಮ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಅಥ್ಲೆಟಿಕ್ಸ್ ತರಬೇತಿ ಪಡೆಯುತ್ತಿದ್ದಾರೆ.

21 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದು ನೂತನ ದಾಖಲೆ ನಿರ್ಮಿಸಿರುವ ಭಾನವಿಯ ಸಾಧನೆಗೆ ಆಳ್ವಾಸ್ ವಿದ್ಯಾಸಂಸ್ಥೆ ಸೇರಿದಂತೆ ಕ್ರೀಡಾಭಿಮಾನಿಗಳಿಂದ ಅಭಿನಂದನೆಗಳು ವ್ಯಕ್ತವಾಗಿವೆ.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ